"होय्सळवंशः" इत्यस्य संस्करणे भेदः

No edit summary
पङ्क्तिः ९५:
 
==अर्थव्यवस्था==
होय्सळानां प्रशासनव्यवस्थायाः मुख्यायस्य मूलं कृषिः एव । तेषाम् अर्थव्यवस्था कृष्याधारिता आसीत् । राजोपचारस्य प्रतिफलत्वेन राजानः कृषिक्षेत्राणि यच्छान्ति स्म । पश्चिमाद्रिसानुप्रदेशेषु योग्यवातावरणे पशुपालनं, वाटिकाकृषिः, साम्बारवस्तूनां कृषिः इत्यादीनि कुर्वन्ति स्म । विशलक्षेत्राणां दक्षिणकर्णाटके शालिक्षेत्राणि, यवक्षेत्राणि च अधिकानि भवन्ति स्म । स्थलीयजनाः स्वोपयोगाय लघुजलबन्धान्, सरांसि कुल्याः, वापीकूपान् च नर्मान्ति स्म । बृहज्जलानयनार्थं विष्णुसागरः, शान्तिसागरः, बल्लालरायसागरः, इत्यादयः जलाशयाः राज्ञा निर्मिताः आसन् ।
 
ಹೊಯ್ಸಳ ಆಡಳಿತದ ಮುಖ್ಯ ಆದಾಯ ಮೂಲ ಕೃಷಿ ಆಧಾರಿತ ಅರ್ಥವ್ಯವಸ್ಥೆಯಾಗಿತ್ತು. ತಮಗೆ ಸಲ್ಲಿಸಿದ ಸೇವೆಗೆ ಪ್ರತಿಯಾಗಿ ರಾಜರುಗಳು ಜಮೀನುಗಳನ್ನು ಜಹಗೀರು ನೀಡುತ್ತಿದ್ದರು. ಈ ಜಹಗೀರದಾರರು ಆ ಜಮೀನಿನ ಒಕ್ಕಲುಗಳು ಉತ್ಪಾದಿಸಿದ ಕೃಷಿ ಮತ್ತು ವನೋತ್ಪನ್ನಗಳ ಒಡೆತನ ಗಳಿಸಿಕೊಳ್ಳುತ್ತಿದ್ದರು. ಈ ಜಮೀನುದಾರರಲ್ಲಿ ಎರಡು ವಿಧಗಳಿದ್ದವು. ಪ್ರಜಾ ಗವುಂಡರು ಅಂತಸ್ತಿನಲ್ಲಿ , ಧನಾಡ್ಯ ಪ್ರಭು ಗವುಂಡರಿಗಿಂತ ಕೆಳಗಿದ್ದರು. ಮಲೆನಾಡು ಪ್ರದೇಶದಲ್ಲಿ , ಸೂಕ್ತ ಹವಾಮಾನದ ಕಾರಣ, ಪಶುಪಾಲನೆ, ತೋಟಗಾರಿಕೆ ಮತ್ತು ಸಾಂಬಾರ ಪದಾರ್ಥಗಳ ಕೃಷಿ ನಡೆಯುತ್ತಿತ್ತು. ಬಯಲುನಾಡಿನಲ್ಲಿ ಭತ್ತ ಮತ್ತು ಜೋಳವನ್ನು ಬೆಳೆಯಲಾಗುತ್ತಿತ್ತು. ಸ್ಥಳೀಯರ ಖರ್ಚಿನಲ್ಲಿ ಕಟ್ಟಿ , ದುರಸ್ತಿ ಮಾಡಲಾಗುತ್ತಿದ್ದ ಕೆರೆ ಕಟ್ಟೆಗಳು, ಕಾಲುವೆಗಳು , ಬಾವಿಗಳು ಇವುಗಳ ಮೇಲೆ ಹೊಯ್ಸಳ ರಾಜರು ಸುಂಕ ವಿಧಿಸಿದ್ದರು. ದೊಡ್ಡ ನೀರಾವರಿಗೆ ವಿಷ್ಣುಸಾಗರ,ಶಾಂತಿಸಾಗರ, ಬಲ್ಲಾಳರಾಯಸಾಗರ ಇತ್ಯಾದಿ ಕೆರೆಗಳನ್ನು ರಾಜ್ಯದ ಖರ್ಚಿನಲ್ಲಿ ಕಟ್ಟಿಸಲಾಗಿತ್ತು.
 
ಪಶ್ಚಿಮ ಕರಾವಳಿಯಲ್ಲಿ , ಜನಸಾಮಾನ್ಯರ ಪ್ರಯಾಣಕ್ಕೆ ಮತ್ತು ಅಶ್ವಸೇನೆಗಳಿಗೆ , ಕುದುರೆಗಳನ್ನು ಆಮದು ಮಾಡಿ ಸರಬರಾಜು ಮಾಡುವುದು ದೊಡ್ಡ ವ್ಯಾಪಾರೋದ್ಯಮವಾಗಿತ್ತು. ಕಾಡುಗಳಲ್ಲಿನ ಬೆಲೆಬಾಳುವ ತೇಗವೇ ಮೊದಲಾದ ಮರಗಳ ನಾಟಾ ತಯಾರಿಸಿ , ಇಂದಿನ ಕೇರಳದಲ್ಲಿದ್ದ ಬಂದರುಗಳ ಮೂಲಕ ರಫ್ತು ಮಾಡಲಾಗುತ್ತಿತ್ತು. ಚೀನಾದಲ್ಲಿ ದೊರೆತ [[ಶುಂಗ ಸಾಮ್ರಾಜ್ಯ|ಶುಂಗ ಸಾಮ್ರಾಜ್ಯದ]] ದಾಖಲೆಗಳ ಪ್ರಕಾರ, ಉತ್ತರ [[ಚೀನಾ|ಚೀನಾದಲ್ಲಿ]] [[ಭಾರತ|ಭಾರತದ]] ವ್ಯಾಪಾರಿಗಳು ಕಾಣಸಿಗುತ್ತಿದ್ದು , ಇದು ಸಮುದ್ರದಾಚೆಯ ಪ್ರದೇಶಗಳೊಂದಿಗೆ ಸಕ್ರಿಯ ವ್ಯಾಪಾರ ಸಂಪರ್ಕವಿದ್ದುದನ್ನು ಸೂಚಿಸುತ್ತದೆ. ದಕ್ಷಿಣ ಭಾರತದಿಂದ ಜವಳಿ, ಸಾಂಬಾರ ಪದಾರ್ಥಗಳು, ಔಷದೀಯ ಸಸ್ಯಗಳು, ರತ್ನಗಳು, ಮಣ್ಣಿನ ಸಾಮಗ್ರಿಗಳು, ಉಪ್ಪು, ಆಭರಣಗಳು, ಬಂಗಾರ, ದಂತ, ಖಡ್ಗಮೃಗದ ಕೊಂಬು, ಸುವಾಸನಾ ದ್ರವ್ಯಗಳು, ಶ್ರೀಗಂಧ, ಕರ್ಪೂರ ಮೊದಲಾದ ವಸ್ತುಗಳು ಚೀನಾ, ಧೋಫರ್, ಏಡನ್ ಮತ್ತು ಸಿರಾಫ್ ( ಈಜಿಪ್ಟ್, ಅರೇಬಿಯಾ ಮತ್ತು ಪರ್ಶಿಯಾ ದೇಶಗಳಿಗೆ ಹೋಗಲು ಪ್ರವೇಶಬಂದರು)ಗಳಿಗೆ ರಫ್ತಾಗುತ್ತಿತ್ತು. ವಾಸ್ತುತಜ್ಞರು (ವಿಶ್ವಕರ್ಮರು), ಶಿಲ್ಪಿಗಳು, ಕಲ್ಲು ಕಡೆಯುವವರು, ಚಿನಿವಾರರು ಇತ್ಯಾದಿ ದೇವಾಳಯಕ್ಕೆ ಪ್ರತ್ಯಕ್ಷ ಅಥವಾ ಪರೋಕ್ಷವಾಗಿ ಸಂಬಂಧಿಸಿದ ಕುಶಲಕರ್ಮಿಗಳು, ಬಿರುಸಿನಿಂದ ನಡೆಯುತ್ತಿದ್ದ ದೇವಾಲಯ ನಿರ್ಮಾಣದ ಕಾರ್ಯದಿಂದ , ಸಾಕ್ಡು ಸ್ಥಿತಿವಂತರಾಗಿದ್ದರು.
"https://sa.wikipedia.org/wiki/होय्सळवंशः" इत्यस्माद् प्रतिप्राप्तम्